• ಮುಖಪುಟ
  • ಸುದ್ದಿಗಳು
  • ರಾಜ್ಯ
  • ಓಟಿನ ಬೇಟೆ
  • ರಾಷ್ಟ್ರೀಯ
  • ಜಗತ್ತು
  • ಕ್ರೀಡೆ
  • ವಾಣಿಜ್ಯ
  • ಹೊರನಾಡು ಕನ್ನಡಿಗ
  • ನಿಮ್ಮ ಜಿಲ್ಲೆ
  • ಬೆಂಗಳೂರು ನಗರ
  • ಬೆಂಗಳೂರು ಗ್ರಾಮಾಂತರ
  • ಬೆಳಗಾವಿ
  • ಬಳ್ಳಾರಿ
  • ಬೀದರ
  • ಬಾಗಲಕೋಟೆ
  • ವಿಜಯಪುರ
  • ಚಾಮರಾಜನಗರ
  • ಚಿಕ್ಕಮಗಳೂರು
  • ಚಿಕ್ಕಬಳ್ಳಾಪುರ
  • ಚಿತ್ರದುರ್ಗ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ಗದಗ
  • ಕಲುಬುರಗಿ
  • ಹಾಸನ
  • ಹಾವೇರಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಮಂಡ್ಯ
  • ಮೈಸೂರು
  • ರಾಮನಗರ
  • ರಾಯಚೂರು
  • ಶಿವಮೊಗ್ಗ
  • ತುಮಕೂರು
  • ಉಡುಪಿ
  • ಉತ್ತರ ಕನ್ನಡ
  • ಯಾದಗಿರಿ
  • ಸುದಿನ
  • ಸುದಿನ ಆಯ್ಕೆ
  • ಪದಾರ್ಥ ಚಿಂತಾಮಣಿ
  • ಫ್ಯೂಷನ್ - ಪ್ರವಾಸ - ಮನರಂಜನೆ
  • ಯೋಗಕ್ಷೇಮ
  • ನಿಮ್ಮ ಊರು-ನಿಮ್ಮ ಧ್ವನಿ
  • ಎಜುಗೈಡ್
  • ಕರಾವಳಿ
  • ಮಂಗಳೂರು
  • ಪುತ್ತೂರು-ಬೆಳ್ತಂಗಡಿ
  • ಉಡುಪಿ
  • ಕುಂದಾಪುರ
  • ಕಾಸರಗೋಡು-ಮಡಿಕೇರಿ
  • ಸಿನೆಮಾ
  • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ
  • ಬಾಲಿವುಡ್‌ ವಾರ್ತೆಗಳು
  • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ
  • ಸಂದರ್ಶನಗಳು
  • ಚಿತ್ರತಾರೆಗಳು
  • ಸಿನಿಮಾ ಗ್ಯಾಲರಿ
  • ವೈವಿಧ್ಯ
  • ನಗೆ ಹನಿ
  • ಕಿಚನ್ ರೂಂ
  • ಆರೋಗ್ಯ
  • ಫ್ಯಾಶನ್
  • ಪ್ರವಾಸ
  • ಅಂಕಣಗಳು
  • ವೆಬ್ ಫೋಕಸ್
  • ನೆಲದ ನಾಡಿ
  • ಕಾಸು ಕುಡಿಕೆ
  • ಚಕಿತ ಚಿತ್ತ
  • ಅಭಿಮತ
  • ವಿಐಪಿ ಕಾಲಂ
  • ದಾರಿ ದೀಪ
  • ಭಾವುಕ ಪ್ರಬುದ್ಧತೆ
  • ವಿಶೇಷ
  • ರಾಜಾಂಗಣ
  • ಮಾಡರ್ನ್ ಆಧ್ಯಾತ್ಮ
  • ರಾಜನೀತಿ
  • ನೇರಾ ನೇರ
  • ನಗರಮುಖಿ
  • ಪುರವಣಿಗಳು
  • ಐಸಿರಿ
  • ಜೋಶ್
  • ಅವಳು
  • ಚಿನ್ನಾರಿ
  • ಸುಚಿತ್ರಾ
  • ಐ ಲವ್ ಬೆಂಗಳೂರು
  • ಬಹುಮುಖಿ
  • ಸಾಪ್ತಾಹಿಕ ಸಂಪದ
  • ಮಹಿಳಾ ಸಂಪದ
  • ಯುವ ಸಂಪದ
  • ಆರೋಗ್ಯವಾಣಿ
  • ಕಲಾವಿಹಾರ
  • ಶಿಕ್ಷಣ ದರ್ಪಣ
  • ಜ್ಯೋತಿಷ್ಯ
  • ಇಂದಿನ ಪಂಚಾಂಗ
  • ದಿನ ಭವಿಷ್ಯ
  • ವಾರ ಭವಿಷ್ಯ
  • ವರ್ಷ ಭವಿಷ್ಯ
  • ವಾಸ್ತು
  • ಗ್ಯಾಲರಿ
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಪ್ರಕೃತಿ
  • ವೈವಿಧ್ಯ
  • ಸಿನಿಮಾ ಗ್ಯಾಲರಿ
  • ಕ್ರೀಡೆ
  • ಸುದಿನ
  • ವಿಡಿಯೊ
2'

ಪ್ರಿಯಾಂಕಾ ಸೆಕೆಂಡ್‌ ಹಾಫ್ ಮಾತು

ಕಾನ್ಸ್‌ಟೇಬಲ್‌ಗ‌ಳ ಶ್ರಮದ ಸುತ್ತ ...
Team Udayavani, May 22, 2018, 11:10 AM IST

"ಸೆಕೆಂಡ್‌ ಹಾಫ್' ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾದಾಗ ಅನೇಕರು ಅಚ್ಚರಿಪಟ್ಟಿದ್ದರು. ಅದಕ್ಕೆ ಕಾರಣ ಪ್ರಿಯಾಂಕಾ ಉಪೇಂದ್ರ ಅವರ ಗೆಟಪ್‌. ಕಾನ್ಸ್‌ಟೇಬಲ್‌ ಆಗಿ ಟಿವಿಎಸ್‌ ಓಡಿಸಿಕೊಂಡು ಬರುವ ಗೆಟಪ್‌ನಲ್ಲಿ ಪ್ರಿಯಾಂಕಾ ಉಪೇಂದ್ರ ಕಾಣಿಸಿಕೊಂಡಿದ್ದರು. ಈಗ "ಸೆಕೆಂಡ್‌ ಹಾಫ್' ಚಿತ್ರ ಬಿಡುಗಡೆಯಾಗಿದೆ. ಯೋಗಿ ದೇವಗಂಗೆ ಈ ಚಿತ್ರದ ನಿರ್ದೇಶಕರು. ಚಿತ್ರ ಜೂನ್‌ ಮೊದಲ ವಾರ ತೆರೆಕಾಣುತ್ತಿದೆ. ಇಡೀ ಸಿನಿಮಾ ಪ್ರಿಯಾಂಕಾ ಸುತ್ತವೇ ಸುತ್ತಲಿದೆ. ವಿಭಿನ್ನ ಪಾತ್ರ ಮಾಡಿರುವ ಖುಷಿಯಲ್ಲಿರುವ ಪ್ರಿಯಾಂಕಾ ಉಪೇಂದ್ರ ಅವರು "ಸೆಕೆಂಡ್‌ ಹಾಫ್' ಬಗ್ಗೆ ಮಾತನಾಡಿದ್ದಾರೆ ....

* ನಿಮ್ಮ "ಸೆಕೆಂಡ್‌ಹಾಫ್' ಚಿತ್ರ ಬಿಡುಗಡೆಯಾಗುತ್ತಿದೆ. ಇದರ ವಿಶೇಷತೆಯೇನು?

ಈ ಸಿನಿಮಾದಲ್ಲಿ ಸಾಕಷ್ಟು ವಿಶೇಷತೆಗಳಿವೆ. ಮೊದಲ ಬಾರಿಗೆ ನಾನು ಪೊಲೀಸ್‌ ಪೇದೆಯಾಗಿ ನಟಿಸಿದ್ದೇನೆ. ಉಪ್ಪಿ ಅಣ್ಣನ ಮಗ ನಿರಂಜನ್‌ ಈ ಚಿತ್ರದ ಮೂಲಕ ಲಾಂಚ್‌ ಆಗುತ್ತಿದ್ದಾನೆ. ತುಂಬಾ ಫ್ರೆಶ್‌ ಆದ ಕಥೆ ಇದೆ. ಚಿತ್ರದಲ್ಲಿ ಸಿಸಿಟಿವಿ ಕೂಡಾ ಪ್ರಮುಖ ಪಾತ್ರ ವಹಿಸುತ್ತದೆ. ಪೊಲಿಟಿಕಲ್‌ ಥ್ರಿಲ್ಲರ್‌ ಸಿನಿಮಾವನ್ನು ಪ್ರೇಕ್ಷಕರಿಗೆ ಈ ಚಿತ್ರ ಇಷ್ಟವಾಗುವ ವಿಶ್ವಾಸವಿದೆ. 

* ನಿಮ್ಮ ಪಾತ್ರದ ಬಗ್ಗೆ ಹೇಳಿ?

ನಾನಿಲ್ಲಿ ಅನುರಾಗ ಎಂಬ ಪಾತ್ರ ಮಾಡಿದ್ದೇನೆ. ಪೊಲೀಸ್‌ ಕಾನ್ಸ್‌ಟೇಬಲ್‌ ಪಾತ್ರ. ಪೊಲೀಸ್‌ ಡಿಪಾರ್ಟ್‌ಮೆಂಟ್‌ನಲ್ಲಿ ಕಾನ್ಸ್‌ಟೇಬಲ್‌ಗ‌ಳ ಕೆಲಸ ಹೇಗಿರುತ್ತದೆ, ಪ್ರಕರಣವೊಂದನ್ನು ಪತ್ತೆಹಚ್ಚುವಲ್ಲಿ ಅವರ ಶ್ರಮ ಏನು ಎಂಬ ಅಂಶವನ್ನು ತೋರಿಸಿದ್ದೇನೆ. ಅದರಲ್ಲೂ ಮಹಿಳಾ ಕಾನ್ಸ್‌ಟೇಬಲ್‌ಗ‌ಳ ಬಗ್ಗೆ ಹೆಚ್ಚು ಫೋಕಸ್‌ ಮಾಡಲಾಗಿದೆ. ಇದು ಪೊಲೀಸ್‌ ಇಲಾಖೆ ಸೇರುವ ಹೆಣ್ಣುಮಕ್ಕಳಿಗೆ ಪ್ರೇರಣೆಯಾಗಬಹುದು. 

* ಪಾತ್ರಕ್ಕಾಗಿ ನಿಮ್ಮ ತಯಾರಿ?

ಮುಖ್ಯವಾಗಿ ನಾನು ಟಿವಿಎಸ್‌ ಓಡಿಸಬೇಕಿತ್ತು. ಅದನ್ನು ಕಲಿತೆ. ಈ ಪಾತ್ರಕ್ಕೆ ಬಾಡಿ ಲಾಂಗ್ವೇಜ್‌ ಕೂಡಾ ಮುಖ್ಯ. ಹಾಗಾಗಿ, ಬಾಡಿ ಲಾಂಗ್ವೇಜ್‌ ಮೇಲೆ ಹೆಚ್ಚು ಗಮನಹರಿಸಿದ್ದೇನೆ. ಮೇಕಪ್‌ ಇಲ್ಲದೇ ನಟಿಸಿದ್ದೇನೆ. ಇಡೀ ಪಾತ್ರಕ್ಕೆ ಬೇರೆ ತರಹದ ಲುಕ್ಸ್‌ ಬೇಕಿತ್ತು. ಪಾತ್ರ ಏನು ಬಯಸಿತ್ತೋ, ಅವೆಲ್ಲವನ್ನು ನೀಡಲು ನಾನಿಲ್ಲಿ ಪ್ರಯತ್ನಿಸಿದ್ದೇನೆ. 

* ಕಾನ್ಸ್‌ಟೇಬಲ್‌ಗ‌ಳ ಬಗ್ಗೆ ಏನು ಹೇಳಲು ಹೊರಟಿದ್ದೀರಿ?

ಮೊದಲೇ ಹೇಳಿದಂತೆ ಪೊಲೀಸ್‌ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ಗ‌ಳ ಪಾತ್ರ ಕೂಡಾ ಮಹತ್ವದ್ದಾಗಿರುತ್ತದೆ. ಆದರೆ, ಕೆಲವೊಮ್ಮೆ ಅವರ ಶ್ರಮ ಬೆಳಕಿಗೆ ಬರೋದಿಲ್ಲ. ಒಳ್ಳೆಯ ಕೆಲಸ ಮಾಡಲು ಹುದ್ದೆ ಮುಖ್ಯವಾಗುವುದಿಲ್ಲ, ಜಾಣ್ಮೆ ಹಾಗೂ ಕೆಲಸದ ಮೇಲಿನ ಶ್ರದ್ಧೆ ಸಾಕು ಎಂಬ ಅಂಶವನ್ನು ಈ ಚಿತ್ರದಲ್ಲಿ ಹೇಳಿದ್ದೇವೆ. ಇದೊಂದು ಪೊಲಿಟಿಕಲ್‌ ಥ್ರಿಲ್ಲರ್‌ ಸಿನಿಮಾ. ಒಂದು ಘಟನೆಯ ಸುತ್ತ ಸಿನಿಮಾ ಸಾಗುತ್ತದೆ. ಚಿತ್ರದಲ್ಲಿ ಸ್ವಲ್ಪ ಮಟ್ಟಿನ ಆ್ಯಕ್ಷನ್‌ ಕೂಡಾ ಇದೆ. 

* ಈ ಚಿತ್ರವನ್ನು ಪೊಲೀಸ್‌ ಇಲಾಖೆ ನೋಡಬೇಕು ಅಂತೀರಾ?

ನೋಡಿದ್ರೆ ಒಳ್ಳೆಯದು. ಸಾಕಷ್ಟು ಸೂಕ್ಷ್ಮ ವಿಚಾರಗಳನ್ನು ಇಲ್ಲಿ ಹೇಳಿದ್ದೇವೆ. ಇಡೀ ಸಿನಿಮಾ ನೈಜವಾಗಿ ಮೂಡಿಬಂದಿದೆ. ನಿರ್ದೇಶಕ ಯೋಗಿ ದೇವಗಂಗೆ ಅವರು ಹೊಸ ಕಾನ್ಸೆಪ್ಟ್ನೊಂದಿಗೆ ಚಿತ್ರ ಮಾಡಿದ್ದಾರೆ. 

* ಮೊದಲ ಬಾರಿಗೆ ಒಂದೇ ಮನೆಯ ಇಬ್ಬರು ಒಟ್ಟಿಗೆ ನಟಿಸಿದ್ದೀರಿ?

ಹೌದು, ಉಪ್ಪಿ ಅಣ್ಣನ ಮಗ ನಿರಂಜನ್‌ ಈ ಚಿತ್ರದ ಮೂಲಕ ಲಾಂಚ್‌ ಆಗುತ್ತಿದ್ದಾರೆ. ನಾನು ಮದುವೆಯಾಗಿ ಉಪ್ಪಿ ಮನೆಗೆ ಬರುವಾಗ ಆತ ಪುಟ್ಟ ಪಾಪು. ಈಗ ಹೀರೋ ಆಗಿದ್ದೇನೆ. ಖುಷಿಯಾಗುತ್ತದೆ. ಈ ಚಿತ್ರದಲ್ಲಿ ಆತ ಪಾತ್ರ ಮಾಡುತ್ತಾನೆಂದು ನನಗೆ ಗೊತ್ತಿರಲಿಲ್ಲ. ಅದೊಂದು ದಿನ ಮನೆಗೆ ಬಂದ ನಿರ್ದೇಶಕರು ನಿರಂಜನ್‌ ನೋಡಿ, ಈ ಪಾತ್ರಕ್ಕೆ ಹೊಂದಿಕೆಯಾಗುತ್ತಾರೆಂದು ಅವಕಾಶ ಕೊಟ್ಟಿದ್ದಾರೆ. ನಿರಂಜನ್‌ ಕೂಡಾ ಚೆನ್ನಾಗಿ ನಟಿಸಿದ್ದಾನೆ. ಆತನಿಗೆ ರಂಗಭೂಮಿಯ ಹಿನ್ನೆಲೆಯೂ ಇದೆ. 

* ನಿಮ್ಮ ಪಾತ್ರದ ಬಗ್ಗೆ ಉಪ್ಪಿ ಏನಂತ್ತಾರೆ?

ಅವರಿಗೆ ನಾನು ಯೂನಿಫಾರಂನಲ್ಲಿರುವ ಗೆಟಪ್‌ ಇಷ್ಟವಾಗಿದೆ. "ಆ ಗೆಟಪ್‌ನಲ್ಲಿ ತುಂಬಾ ಕ್ಯೂಟ್‌ ಆಗಿ ಕಾಣುತ್ತೀಯಾ' ಅಂತಾರೆ.

* ಬೇರೆ ಸಿನಿಮಾಗಳ ಬಗ್ಗೆ ಹೇಳಿ?

ಸದ್ಯ "ಸೆಕೆಂಡ್‌ ಹಾಫ್' ಬಿಡುಗಡೆಗೆ ರೆಡಿಯಾಗಿದೆ. ಅದು ಬಿಟ್ಟರೆ "ಹೌರಾ ಬ್ರಿಡ್ಜ್' ಬಹುತೇಕ ಪೂರ್ಣಗೊಂಡಿದೆ. ಇನ್ನೊಂದಿಷ್ಟು ಕಥೆಗಳನ್ನು ಕೇಳುತ್ತಿದ್ದೇನೆ. ಮನರಂಜನೆ ಜೊತೆಗೆ ಸಣ್ಣ ಸಂದೇಶವಿರುವ ಸಿನಿಮಾಗಳನ್ನು ಮಾಡುವ ಆಸೆ ಇದೆ. 

Tags: 
ಪ್ರಿಯಾಂಕಾ ಉಪೇಂದ್ರ
ಸೆಕೆಂಡ್‌ ಹಾಫ್
ಸಂದರ್ಶನ
Priyanka Upendra
second half
Interview
  • NEXT ARTICLE
  • ಮುಖಪುಟ DOWNLOADED

  • ಸುದ್ದಿಗಳು

    • ಸುದ್ದಿಗಳು

    • ರಾಜ್ಯ DOWNLOADED

    • ಓಟಿನ ಬೇಟೆ DOWNLOADED

    • ರಾಷ್ಟ್ರೀಯ DOWNLOADED

    • ಜಗತ್ತು DOWNLOADED

    • ಕ್ರೀಡೆ DOWNLOADED

    • ವಾಣಿಜ್ಯ DOWNLOADED

    • ಹೊರನಾಡು ಕನ್ನಡಿಗ DOWNLOADED

  • ನಿಮ್ಮ ಜಿಲ್ಲೆ

    • ನಿಮ್ಮ ಜಿಲ್ಲೆ

    • ಬೆಂಗಳೂರು ನಗರ DOWNLOADED

    • ಬೆಂಗಳೂರು ಗ್ರಾಮಾಂತರ DOWNLOADED

    • ಬೆಳಗಾವಿ DOWNLOADED

    • ಬಳ್ಳಾರಿ DOWNLOADED

    • ಬೀದರ DOWNLOADED

    • ಬಾಗಲಕೋಟೆ DOWNLOADED

    • ವಿಜಯಪುರ DOWNLOADED

    • ಚಾಮರಾಜನಗರ DOWNLOADED

    • ಚಿಕ್ಕಮಗಳೂರು DOWNLOADED

    • ಚಿಕ್ಕಬಳ್ಳಾಪುರ DOWNLOADED

    • ಚಿತ್ರದುರ್ಗ DOWNLOADED

    • ದಕ್ಷಿಣ ಕನ್ನಡ DOWNLOADED

    • ದಾವಣಗೆರೆ DOWNLOADED

    • ಧಾರವಾಡ DOWNLOADED

    • ಗದಗ DOWNLOADED

    • ಕಲುಬುರಗಿ DOWNLOADED

    • ಹಾಸನ DOWNLOADED

    • ಹಾವೇರಿ DOWNLOADED

    • ಕೊಡಗು DOWNLOADED

    • ಕೊಪ್ಪಳ DOWNLOADED

    • ಕೋಲಾರ DOWNLOADED

    • ಮಂಡ್ಯ DOWNLOADED

    • ಮೈಸೂರು DOWNLOADED

    • ರಾಮನಗರ DOWNLOADED

    • ರಾಯಚೂರು DOWNLOADED

    • ಶಿವಮೊಗ್ಗ DOWNLOADED

    • ತುಮಕೂರು DOWNLOADED

    • ಉಡುಪಿ DOWNLOADED

    • ಉತ್ತರ ಕನ್ನಡ DOWNLOADED

    • ಯಾದಗಿರಿ DOWNLOADED

  • ಸುದಿನ

    • ಸುದಿನ

    • ಸುದಿನ ಆಯ್ಕೆ DOWNLOADED

    • ಪದಾರ್ಥ ಚಿಂತಾಮಣಿ DOWNLOADED

    • ಫ್ಯೂಷನ್ - ಪ್ರವಾಸ - ಮನರಂಜನೆ DOWNLOADED

    • ಯೋಗಕ್ಷೇಮ DOWNLOADED

    • ನಿಮ್ಮ ಊರು-ನಿಮ್ಮ ಧ್ವನಿ DOWNLOADED

    • ಎಜುಗೈಡ್ DOWNLOADED

  • ಕರಾವಳಿ

    • ಕರಾವಳಿ

    • ಮಂಗಳೂರು DOWNLOADED

    • ಪುತ್ತೂರು-ಬೆಳ್ತಂಗಡಿ DOWNLOADED

    • ಉಡುಪಿ DOWNLOADED

    • ಕುಂದಾಪುರ DOWNLOADED

    • ಕಾಸರಗೋಡು-ಮಡಿಕೇರಿ DOWNLOADED

  • ಸಿನೆಮಾ

    • ಸಿನೆಮಾ

    • ಬಾಲ್ಕನಿ-ಸ್ಯಾಂಡಲ್‌ವುಡ್‌ ಸುದ್ದಿ DOWNLOADED

    • ಬಾಲಿವುಡ್‌ ವಾರ್ತೆಗಳು DOWNLOADED

    • ಸಿನೆಪ್ಲೆಕ್ಸ್ -ಚಿತ್ರ ವಿಮರ್ಶೆ DOWNLOADED

    • ಸಂದರ್ಶನಗಳು DOWNLOADED

    • ಚಿತ್ರತಾರೆಗಳು DOWNLOADED

    • ಸಿನಿಮಾ ಗ್ಯಾಲರಿ DOWNLOADED

  • ವೈವಿಧ್ಯ

    • ವೈವಿಧ್ಯ

    • ನಗೆ ಹನಿ DOWNLOADED

    • ಕಿಚನ್ ರೂಂ DOWNLOADED

    • ಆರೋಗ್ಯ DOWNLOADED

    • ಫ್ಯಾಶನ್ DOWNLOADED

    • ಪ್ರವಾಸ DOWNLOADED

  • ಅಂಕಣಗಳು

    • ಅಂಕಣಗಳು

    • ವೆಬ್ ಫೋಕಸ್ DOWNLOADED

    • ನೆಲದ ನಾಡಿ DOWNLOADED

    • ಕಾಸು ಕುಡಿಕೆ DOWNLOADED

    • ಚಕಿತ ಚಿತ್ತ DOWNLOADED

    • ಅಭಿಮತ DOWNLOADED

    • ವಿಐಪಿ ಕಾಲಂ DOWNLOADED

    • ದಾರಿ ದೀಪ DOWNLOADED

    • ಭಾವುಕ ಪ್ರಬುದ್ಧತೆ DOWNLOADED

    • ವಿಶೇಷ DOWNLOADED

    • ರಾಜಾಂಗಣ DOWNLOADED

    • ಮಾಡರ್ನ್ ಆಧ್ಯಾತ್ಮ DOWNLOADED

    • ರಾಜನೀತಿ DOWNLOADED

    • ನೇರಾ ನೇರ DOWNLOADED

    • ನಗರಮುಖಿ DOWNLOADED

  • ಪುರವಣಿಗಳು

    • ಪುರವಣಿಗಳು

    • ಐಸಿರಿ DOWNLOADED

    • ಜೋಶ್ DOWNLOADED

    • ಅವಳು DOWNLOADED

    • ಚಿನ್ನಾರಿ DOWNLOADED

    • ಸುಚಿತ್ರಾ DOWNLOADED

    • ಐ ಲವ್ ಬೆಂಗಳೂರು DOWNLOADED

    • ಬಹುಮುಖಿ DOWNLOADED

    • ಸಾಪ್ತಾಹಿಕ ಸಂಪದ DOWNLOADED

    • ಮಹಿಳಾ ಸಂಪದ DOWNLOADED

    • ಯುವ ಸಂಪದ DOWNLOADED

    • ಆರೋಗ್ಯವಾಣಿ DOWNLOADED

    • ಕಲಾವಿಹಾರ DOWNLOADED

    • ಶಿಕ್ಷಣ ದರ್ಪಣ DOWNLOADED

  • ಜ್ಯೋತಿಷ್ಯ

    • ಜ್ಯೋತಿಷ್ಯ

    • ಇಂದಿನ ಪಂಚಾಂಗ DOWNLOADED

    • ದಿನ ಭವಿಷ್ಯ DOWNLOADED

    • ವಾರ ಭವಿಷ್ಯ DOWNLOADED

    • ವರ್ಷ ಭವಿಷ್ಯ DOWNLOADED

    • ವಾಸ್ತು DOWNLOADED

  • ಗ್ಯಾಲರಿ

    • ಗ್ಯಾಲರಿ

    • ರಾಜ್ಯ DOWNLOADED

    • ರಾಷ್ಟ್ರೀಯ DOWNLOADED

    • ವಿದೇಶ DOWNLOADED

    • ಪ್ರಕೃತಿ DOWNLOADED

    • ವೈವಿಧ್ಯ DOWNLOADED

    • ಸಿನಿಮಾ ಗ್ಯಾಲರಿ DOWNLOADED

    • ಕ್ರೀಡೆ DOWNLOADED

    • ಸುದಿನ DOWNLOADED

  • ವಿಡಿಯೊ DOWNLOADED

  • ePaper

  • Udayavani English Edition