ಉಪಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಕೃಷ್ಣಾರೆಡ್ಡಿ ನಿರ್ಧಾರ
ಚಿಕ್ಕಬಳ್ಳಾಪುರ: ಮೈತ್ರಿ ಸರ್ಕಾರದಲ್ಲಿ ವಿಧಾನಸಭಾ ಉಪಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದ ಜಿಲ್ಲೆಯ ಚಿಂತಾಮಣಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿಯವರು ಉಪಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಕಳೆದ ಎರಡು ದಿನಗಳಿಂದ ಶಾಸಕ ಕೃಷ್ಣಾರೆಡ್ಡಿ, ಚಿಂತಾಮಣಿಯ ತಮ್ಮ ಗೃಹಕಚೇರಿಯಲ್ಲಿ ಉಪಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂಬಂಧ ಅಪ್ತರೊಂದಿಗೆ ಚರ್ಚೆ ನಡೆಸಿದ್ದಾರೆ. ವಾರದೊಳಗೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಅವರ ಆಪ್ತರು "ಉದಯವಾಣಿ'ಗೆ ತಿಳಿಸಿದ್ದಾರೆ.
ಮೈತ್ರಿ ಸರ್ಕಾರ 100 ದಿನಗಳನ್ನು ಪೂರೈಸಿರುವ ಬೆನ್ನಲೇ ಕೃಷ್ಣಾರೆಡ್ಡಿಯವರು ಉಪಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಸಿದ್ದರಾಮಯ್ಯನವರ ಪ್ರಬಲ ವಿರೋಧದ ನಡುವೆ, ಜೆಡಿಎಸ್ ವರಿಷ್ಠರ ಒತ್ತಾಯದಿಂದ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲದೊಂದಿಗೆ ಜುಲೈ 7ರಂದು ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದರು.